ಎಐಸಿಸಿ ಅಲ್ಪಸಂಖ್ಯಾತರ ವಿಭಾಗದ ಸಂಯೋಜಕರನ್ನು ಭೇಟಿಯಾದ ದ. ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಿಯೋಗ…

ಬೆಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಸಂಯೋಜಕರಾದ ಕರ್ನಾಟಕ ರಾಜ್ಯ ಉಸ್ತುವಾರಿ ಪದಾಧಿಕಾರಿ ಮಹಾರಾಷ್ಟ್ರದ ಶ್ರೀಮತಿ ಜಿನಲ್ ಗಾಲ ಬೆಂಗಳೂರಿಗೆ ಭೇಟಿ ನೀಡಿ ರಾಜ್ಯ ವಿವಿಧ ಜಿಲ್ಲೆಗಳ ಅಧ್ಯಕ್ಷರು ಮತ್ತು ರಾಜ್ಯ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಅನುಸರಿಸಬೇಕಾದ ಚುನಾವಣಾ ಕಾರ್ಯತಂತ್ರಗಳ ರೂಪುರೇಷೆಯ ಕ್ರಿಯಾಯೋಜನೆಯನ್ನು ಸಭೆಯಲ್ಲಿ ಮಂಡಿಸಿದರು.
ವಿಧಾನಪರಿಷತ್ ಮಾಜಿ ಮುಖ್ಯ ಸಚೇತಕರಾದ ಐವನ್ ಡಿ ಸೋಜಾ ವಿಷಯ ಮಂಡಿಸಿದರು. ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು ಗಾಲಾ ರನ್ನು ಭೇಟಿ ಮಾಡಿ ವಿಚಾರ ವಿನಿಮಯ ನಡೆಸಿದರು. ದ. ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸುಳ್ಯ, ಸಂಘಟನಾ ಕಾರ್ಯದರ್ಶಿ ಹಬೀಬುಲ್ಲಾ ಕಣ್ಣೂರ್, ಕಾರ್ಯದರ್ಶಿ ಅಬೂಸಾಲಿ ಗೂನಡ್ಕ ನಿಯೋಗದಲ್ಲಿದ್ದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮೈನಾರಿಟಿ ವಿಭಾಗ ಅಧ್ಯಕ್ಷ, ವಿಧಾನಪರಿಷತ್ ಶಾಸಕ ಅಬ್ದುಲ್ ಜಬ್ಬಾರ್, ಕೆಪಿಸಿಸಿ ಅಲ್ಪಸಂಖ್ಯಾತರ ಆಡಳಿತ ವಿಭಾಗದ ಪ್ರಧಾನ ಕಾಯದರ್ಶಿ ಇರ್ಷಾದ್ ಬೆಂಗಳೂರು ಉಪಸ್ಥಿತರಿದ್ದರು.
