ಅ.17 ಮತ್ತು 18 ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಕಾರ್ಯಾಗಾರ….
ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು , ವಿವೇಕಾನಂದ ಸೆಂಟರ್ ಫಾರ್ ರೀಸರ್ಚ್ ಸ್ಟಡೀಸ್,
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕರಿಗಾಗಿ ವಾಣಿಜ್ಯ ವ್ಯವಹಾರ ನಿರ್ವಹಣೆಯಲ್ಲಿ ನೂತನ ದೃಷ್ಟಿಕೋನಗಳು ಮತ್ತು ಸಂಶೋಧನಾ
ವಿಧಾನಗಳ ಮಾಹಿತಿ ಎನ್ನುವ ವಿಷಯದ ಬಗ್ಗೆ ಎರಡು ದಿನಗಳ ಕಾರ್ಯಾಗಾರವನ್ನು ಅಕ್ಟೋಬರ್ 17 ಮತ್ತು
18 ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ದಿನಾಂಕ 17 ರಂದು ಪೂರ್ವಾಹ್ನ 9.30ಕ್ಕೆ ನಡೆಯುವ ಸಮಾರಂಭದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ
ಉಪಕುಲಪತಿಗಳಾದ ಪ್ರೊ.ಬಿ.ಪಿ.ವೀರಭದ್ರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇಂಜಿನಿಯರಿಂಗ್
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ.ಸತೀಶ್ ರಾವ್ ಪಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಡಾ.ಪಿ.ಎಲ್.ಧರ್ಮ ಗೌರವ
ಅತಿಥಿಗಳಾಗಿ ಭಾಗವಹಿಸುತ್ತಾರೆ.ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು ಮತ್ತು ವಿವಿಧ ಕಾಲೇಜುಗಳ ಉಪನ್ಯಾಸಕರು ಇದರಲ್ಲಿ ಭಾಗವಹಿಸುತ್ತಾರೆ ಎಂದು ಪ್ರಾಂಶುಪಾಲ
ಡಾ.ಎಂ.ಎಸ್.ಗೋವಿಂದೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.