ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಲ್ಲಬೆಟ್ಟು – ಬೀಳ್ಕೊಡುಗೆ ಸಮಾರಂಭ…

ಮೂಡುಬಿದ್ರಿ: ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಲ್ಲಬೆಟ್ಟು ಮೂಡುಬಿದಿರೆ ಇಲ್ಲಿನ 2022- 23 ನೇ ಸಾಲಿನ SSLC ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಧನಲಕ್ಷ್ಮಿ ಕ್ಯಾಶ್ಯೂ ಇಂಡಸ್ಟ್ರೀಸ್ ನ ಮಾಲೀಕರಾದ ಶ್ರೀಪತಿ ಭಟ್, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಯುವರಾಜ ಜೈನ್, ಪುರಸಭಾ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಶಶಿಕಿರಣ್, ಕ್ಷೇತ್ರ ಶಿಕ್ಷಣಾಧಿಕಾರಿಯಾದ ಗಣೇಶ್ ವೈ, ವಸತಿ ಶಾಲೆಯ ಪ್ರಾಚಾರ್ಯರಾದ ಎಸ್ ಜಿ ಹಿರೇಮಠ, ಜ್ಯೋತಿ ಗೂಳಪ್ಪನವರು, ಶ್ರೀಮತಿ ಅದೃಷ್ಟ, ಭಾಸ್ಕರ್ ಪಾಲಡ್ಕ, ಎಸ್ ಡಿ ಎಂ ಸಿ ಅಧ್ಯಕ್ಷರಾದ ದಿನೇಶ್ ಎಂ, ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲೆಯ ದಾನಿಗಳು ಮೊದಲಾದವರು ಉಪಸ್ಥಿತರಿದ್ದರು.


