ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಶ್ರೀನಿಧಿ ಆರ್ ಪೈ ಅವರಿಗೆ 9ನೇ ರ‌್ಯಾಂಕ್…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಹಿತಿ ತಂತ್ರಜ್ಞಾನ ವಿಭಾಗದ 2018-2022 ನೇ ಸಾಲಿನ ವಿದ್ಯಾರ್ಥಿನಿ ಶ್ರೀನಿಧಿ ಆರ್ ಪೈ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಾಹಿತಿ ತಂತ್ರಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ 9ನೇ ರ‌್ಯಾಂಕ್ ಗಳಿಸಿದ್ದಾರೆ.
ಶ್ರೀನಿಧಿ ಆರ್ ಪೈ ಅವರ ಈ ಅಮೋಘ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ, ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ಕಾಲೇಜಿನ ಆಡಳಿತ ಮಂಡಳಿ, ವಿಭಾಗದ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

dsc 0076
Sponsors

Related Articles

Back to top button