ಸುದ್ದಿ

ಎಸ್. ಗಂಗಾಧರ ಭಟ್ ಕೊಳಕೆ ನಿಧನ…

ಬಂಟ್ವಾಳ: ಸಜಿಪಮೂಡ ಗ್ರಾಮದ ಕೊಳಕೆ ನಿವಾಸಿ, ಕೃಷಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಎಸ್.ಗಂಗಾಧರ ಭಟ್ ಕೊಳಕೆ(77) ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.27ರಂದು ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅವರು ನಂದಾವರ ಶ್ರೀ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಮಾಜಿ ಟ್ರಸ್ಟಿಯಾಗಿ, ಬಂಟ್ವಾಳ ತಾಲೂಕು ಕಸಾಪ ಕನ್ನಡ ಭವನ ನಿರ್ಮಾಣ ಕಟ್ಟಡ ಸಮಿತಿ ಅಧ್ಯಕ್ಷರಾಗಿ, ನೀರ್ಪಾಜೆ ಭೀಮ‌ ಭಟ್ ಅಭಿಮಾನಿ ಬಳಗದ‌ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ತನ್ನ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ದಾನ ಮಾಡಿದ್ದರು.

Advertisement

Related Articles

Back to top button