ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ…

ಸುಳ್ಯ: ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘ
ವಿಶ್ವವಿದ್ಯಾಲಯ (ಆರ್.ವಿ.ಎಸ್.ಯು)ದ ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ.
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರುಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಸರಕಾರಕ್ಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾಪನೆಯನ್ನು ತಯಾರು ಮಾಡಿ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ.