ಹಲವು ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ – ರಾಜೇಶ್ ನಾಯ್ಕ್…
ಬಂಟ್ವಾಳ: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಕ್ಷೇತ್ರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಅವರು ರೂ. 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸರಕಾರಿ ಪದವಿಪೂರ್ವ ಕಾಲೇಜ್ ಬಿ.ಮೂಡ ಇದರ ನೂತನ ಕಟ್ಟಡದ ಉದ್ಘಾಟನೆ ನಡೆಸಿದ ಬಳಿಕ ಮಾತನಾಡಿದರು.
ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು ತಮಗೆ ಬೇಕಾದ ಶಿಕ್ಷಣವನ್ನು ಆಯ್ಕೆ ಮಾಡಿ ಶಿಕ್ಷಣದಲ್ಲಿ ಮುಂದುವರಿಯಲು ಹಾಗೂ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುರಸಭಾ ವತಿಯಿಂದ ಸಿಗುವ ಆರ್ಥಿಕ ಪ್ರೋತ್ಸಾಹ ಧನವನ್ನುಮೂವರು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಗುತ್ತಿಗೆದಾರ ಸುದರ್ಶನ ಬಜ ಅವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜನಿ ಚಿಕ್ಕಯ್ಯಮಠ ಕಾರ್ಯಕ್ರಮ ದ ಅಧ್ಯಕ್ಷೆ ತೆ ವಹಿಸಿದ್ದರು.
ಪುರಸಭಾ ಸದಸ್ಯೆ ಝೀನತ್ ಫಿರೋಜ್, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಶ್ರೀನಿವಾಸ ಮೆಲ್ಕಾರ್, ಸುಷ್ಮಾಚರಣ್ ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ, ಪಿಡಬ್ಲೂಡಿ ಎ.ಇ.ಇ.ಶಿವಶಂಕರ್,ಸಹಾಯಕ ಇಂಜಿನಿಯರ್ ಅಮೃತ್ ಕುಮಾರ್, ಪ್ರಮುಖರಾದ ಮಚ್ಚೇಂದ್ರ ಸಾಲಿಯಾನ್,ರಮೇಶ್ ಸಾಲಿಯಾನ್, ಇಕ್ಬಾಲ್ ಗೂಡಿನ ಬಳಿ ಮತ್ತಿತರರು ಉಪಸ್ಥಿತರಿದ್ದರು.