ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ ನಿಧನ- ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ…

ಸುಳ್ಯ: ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸತ್ ಸದಸ್ಯರಾದ ಆರ್. ದ್ರುವನಾರಾಯಣ ರವರ ನಿಧನಕ್ಕೆ ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ ವ್ಯಕ್ತಪಡಿಸಿರುತ್ತಾರೆ.
ಕಳೆದ 30 ವರ್ಷಗಳಿಂದ ಒಡನಾಡಿಯಾಗಿದ್ದ, ಆತ್ಮೀಯರಾಗಿದ್ದ ಆರ್. ದ್ರುವನಾರಾಯಣರವರು ಎನ್.ಎಸ್.ಯು.ಐ ಮೂಲಕ ಯುವಕ ಕಾಂಗ್ರೆಸ್ ಹಾಗೂ ಕಾಂಗ್ರೇಸ್ ಪಕ್ಷದಲ್ಲಿ ವಿವಿದ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಚಾಮರಾಜ ನಗರದ ಜಿಲ್ಲೆಯಿಂದ ಎರಡು ಬಾರಿ ಶಾಸಕರಾಗಿ, ಲೋಕಸಭಾ ಸದಸ್ಯರಾಗಿ ಮತ್ತು ಕೆ.ಪಿ.ಸಿ.ಸಿಯ ಕಾರ್ಯದ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರ ಅಗಲಿಕೆಯು ಅತ್ಯಂತ ದುಃಖ ತಂದಿದೆ. ಅವರ ಅಕಾಲಿಕ ನಿಧನವು ಕಾಂಗ್ರೇಸ್ ಪಕ್ಷಕ್ಕೆ ಅಘಾತವನ್ನುಂಟು ಮಾಡಿದೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಕುಟುಂಬ ವರ್ಗದವರಿಗೆ, ಹಿತೈಷಿಗಳಿಗೆ ಪಕ್ಷದ ಕಾರ್ಯಕರ್ತರಿಗೆ ಅಗಲಿಕೆಯ ನೋವನ್ನು ಮತ್ತು ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

whatsapp image 2023 03 11 at 10.04.59 am
Sponsors

Related Articles

Back to top button