ಹಾಜಿ ಯು.ಕೆ ಮೋನು ಕಣಚೂರು ಅವರಿಗೆ ಗೌರವ ಡಾಕ್ಟರೇಟ್ – ಮಹಮ್ಮದ್ ಇಕ್ಬಾಲ್ ಎಲಿಮಲೆ ಅಭಿನಂದನೆ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜ ಸೇವೆ ,ಧಾರ್ಮಿಕ ಕ್ಷೇತ್ರದಲ್ಲಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವಾರು ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಕಾರಣಿಭೂತರಾಗಿ ಸಮಾಜಕ್ಕೆ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ ಮಂಗಳೂರು ವಿಶ್ವವಿದ್ಯಾನಿಲಯ 41ನೇ ಘಟಿಕೋತ್ಸವದಲ್ಲಿ ಕರ್ನಾಟಕ ಸರಕಾರದ ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪಡೆದ ಕಣಚೂರ್ ಗ್ರೂಪಿನ ಸ್ಥಾಪಕರು ಮತ್ತು ಕಣಚೂರ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರು ಆದ ಹಾಜಿ ಯು.ಕೆ . ಮೋನು ಕಣಚೂರು ರವರನ್ನು ಜನತಾದಳದ ರಾಜ್ಯ ಕಾರ್ಯದರ್ಶಿ ಹಾಗೂ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು
