ಮುಸ್ಲಿಂ ಸಮುದಾಯದ ಮೀಸಲಾತಿ ಕಡಿತ ಪುನರ್ ಪರಿಶೀಲಿಸುವಂತೆ ಮನವಿ…

ಸುಳ್ಯ: ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಮೀಸಲಾತಿಯನ್ನು ಕಡಿತಗೊಳಿಸಿರುವ ಸರಕಾರದ ನಿರ್ಧಾರ ಅವೈಜ್ಞಾನಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ದವಾದದ್ದು , ತಕ್ಷಣ ಕರ್ನಾಟಕದ ಮಾನ್ಯ ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ನ್ಯಾಯ ಒದಗಿಸಿ ಕೊಡಬೇಕು ಮತ್ತು ಸರಕಾರ ಮೀಸಲಾತಿ ಕಡಿತವನ್ನು ಪುನರ್ ಪರಿಶೀಲನೆ ನಡೆಸಿ, ಈ ಹಿಂದೆ ಇದ್ದ ಮೀಸಲಾತಿಯನ್ನು ಮುಂದುವರಿಸುವಂತೆ ಆದೇಶ ಹೊರಡಿಸಲು ಆಗ್ರಹಿಸಿ ಕರ್ನಾಟಕ ರಾಜ್ಯಪಾಲರಿಗೆ, ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸುಳ್ಯ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ. ಶಹೀದ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದೀಕ್ ಕೋಕೋ, ಸುಳ್ಯ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ಉಪಸ್ಥಿತರಿದ್ದರು.

Sponsors

Related Articles

Back to top button