ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ – ಸಾಹಿತ್ಯ ಸಂಭ್ರಮ ಕಾರ್ಯಕ್ರಮ…

ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕಬಕ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕ ಇವರ ಸಂಯೋಜನೆಯಲ್ಲಿ ಹಾಗೂ ಮಿತ್ರಂಪಾಡಿ ಜಯರಾಮ್ ರೈ ಅವರ ಮಹಾಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷವಾಕ್ಯದಲ್ಲಿ ನಡೆಯುವ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮದ ಐದನೇ ಸರಣಿ ಕಾರ್ಯಕ್ರಮವು ಕಬಕ ಗ್ರಾಮದ ಗೌಡ ಸಮುದಾಯಭವನ ಮುರದಲ್ಲಿ ಮಾ. 30ರಂದು ನಡೆಯಿತು.
ಸ್ಥಳೀಯ ಸಾಧಕರಿಗೆ ಸನ್ಮಾನ:
ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸನ ಅಧ್ಯಯನಕಾರರಾದ ಶ್ರೀ ಉಮಾನಾಥ್ ಶೆಣೈ, ಸಾಹಿತಿ ಶಿಕ್ಷಕಿ ಶಾಂತಾ ಪುತ್ತೂರು, ಸಂಗೀತ ಕಲಾವಿದರಾದ ಮಿಥುನ್ ರಾಜ್ ವಿದ್ಯಾಪುರ, ಡಾ.ಶ್ರೀಶಭಟ್ ಸ್ಥಾಪಕಾಧ್ಯಕ್ಷರು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ (ರಿ), ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶ್ರೀಮತಿ ಪ್ರೇಮಲತಾ ಎಂ,ಶ್ರೀಮತಿ ಸುಲೋಚನಾ ಕೆ ರವರನ್ನು ಸ್ಥಳೀಯ ಸಾಧಕರ ನೆಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾದ ಪುತ್ತೂರು ಉಮೇಶ್ ನಾಯಕ್ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಡಾ.ಸುರೇಶ ನೆಗಳಗುಳಿ, ಗೌರವಾಧ್ಯಕ್ಷ ಜಯಾನಂದ ಪೆರಾಜೆ, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ರಾದ ಡಾ.ಹರ್ಷಕುಮಾರ್ ರೈ ಮಾಡಾವು, ಎಂ.ಪಿ.ಅಬೂಬಕರ್, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ರಾದ ಹಾಜಿ ಅಬೂಬಕರ್ ಆರ್ಲಪದವು, ಆಶಾ ಇ. ಅಭಿವೃದ್ಧಿ ಅಧಿಕಾರಿಗಳು ಗ್ರಾಮಪಂಚಾಯತ್ ಕಬಕ, ಗೌಡ ಸಮುದಾಯ ಭವನದ ಕಾರ್ಯ ಕಾರಿ ಸಮಿತಿ ಸದಸ್ಯ ನಾರಾಯಣಗೌಡ ಉಪಸ್ಥಿತರಿದ್ದರು.

ಶಿಕ್ಷಣ ಇಲಾಖೆಯಲ್ಲಿ ದಕ್ಷ ಪ್ರಾಮಾಣಿಕವಾಗಿ ಸೇವೆಯನ್ನು ನೀಡುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಲೋಕೇಶ್ ಎಸ್.ಆರ್ ಅವರಿಗೆ ಗಡಿನಾಡಭೂಷಣ ರಾಜ್ಯ ಪ್ರಶಸ್ತಿಯನ್ನು ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಡಾ ಅಬೂಬ್ಬಕರ್ ಆರ್ಲಪದವು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಶ್ರೀ ಹರಿಪ್ರಸಾದ್, ಹಿರಿಯ ಸಾಹಿತಿ ಗಳಾದ ನಾರಾಯಣ ರೈ ಕುಕ್ಕುವಳ್ಳಿ ,ಡಾ.ಶ್ರೀಧರ್ ಎಚ್ .ಜಿ .ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Sponsors

Related Articles

Back to top button