ಬಂಟ್ವಾಳ ಬಿಜೆಪಿ ಚುನಾವಣಾ ಕಚೇರಿಗೆ ಬಿ ಎಲ್ ಸಂತೋಷ್ ಭೇಟಿ…

ಬಂಟ್ವಾಳ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಎ. 16 ರಂದು ಬಂಟ್ವಾಳ ಬಿಜೆಪಿ ಚುನಾವಣಾ ಕಚೇರಿಗೆ ಭೇಟಿ ನೀಡಿದರು.
ಕಚೇರಿಗೆ ಆಗಮಿಸುತ್ತಿದ್ದಂತೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯವೈಖರಿಯನ್ನು ಮೆಚ್ಚಿ ಬಂಟ್ವಾಳ ಶಾಸಕ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರಿಗೆ ಶುಭಹಾರೈಸಿದರು. ಅ ಬಳಿಕ ಸುಮಾರು ಅರ್ಧ ತಾಸುಗಳ ಕಾಲ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.
ಅದಕ್ಕೂ ಮುನ್ನ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ತಯಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ಜಿಲ್ಲಾ ಮಾಧ್ಯಮ ಸಂಚಾಲಕ ಸಂದೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಕಾನೂನು ಪ್ರಕೋಷ್ಟದ ಜಿಲ್ಲಾ ಸಂಚಾಲಕ ಶ್ರೀಧರ್ ಶೆಟ್ಟಿ ಪುಳಿಂಚ, ಬಂಟ್ವಾಳ ಕ್ಷೇತ್ರ ಸಮಿತಿ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು,ಪ್ರಕಾಶ್ ಅಂಚನ್, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಯಶೋಧರ ಕರ್ಬೆಟ್ಟು, ಸೀತಾರಾಮ ಪೂಜಾರಿ, ಮಹೇಶ್ ಶೆಟ್ಟಿ ಜುಮಾದಿಗುಡ್ಡೆ,ಸುರೇಶ್ ಕೋಟ್ಯಾನ್, ಮನೋಜ್ ಜಾರಂದಗುಡ್ಡೆ,ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಅಭಿಷೇಕ್ ಸರಪಾಡಿ ಮತ್ತಿತರರು ಉಪಸ್ಥಿತರಿದ್ದರು.

Related Articles

Back to top button