ರೈತರ ಪಂಪ್ ಗೆ ವಿದ್ಯುತ್ ಸಂಪರ್ಕ ಕಡಿತ – ಆದೇಶವನ್ನು ಹಿಂಪಡೆಯುವಂತೆ ಮನವಿ…

ಬಂಟ್ವಾಳ: ರೈತರ ಪಂಪ್ ಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ರೈತ ವಿರೋಧಿ ಆದೇಶವನ್ನು ಹಿಂಪಡೆಯುವಂತೆ ಮನವಿ ಪತ್ರವನ್ನು ಬಂಟ್ವಾಳ ತಹಶೀಲ್ದಾರ್ ಅವರಿಗೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸಲ್ಲಿಸಲಾಯಿತು.
ಬಂಟ್ವಾಳ ತಾಲೂಕು ರೈತ ಸಂಘದ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್, ಪಾಣೆ ಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ರೈತ ಮುಖಂಡರಾದ ಇದ್ದೀನಬ್ಬ, ಶಾಂತಕುಮಾರ ಮಯ್ಯ, ಸಂದೇಶ ಗಟ್ಟಿ, ಅಬ್ದುಲ್ ,ಜಬ್ಬಾರ್, ಸುರೇಶ್ ಗಟ್ಟಿ, ಅಬ್ದುಲ್ ಖಾದರ್ ಪಡ್ಪು ಮೊದಲಾದವರು ನಿಯೋ ಗದಲ್ಲಿದ್ದರು. ಮೆಸ್ಕಾಂ ಎಇ ಇ ನಾರಾಯಣ ಜಿ ಇವರನ್ನು ಕೂಡ ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಲಾಯಿತು.

Related Articles

Back to top button