ಡಾ. ಮಾಲತಿ ಶೆಟ್ಟಿ, ಮಾಣೂರುರವರಿಗೆ ಸನ್ಮಾನ…

ಬಂಟ್ವಾಳ: ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ಬಂಟರ ಸಂಘ ಬಂಟ್ವಾಳ ಇದರ ವತಿಯಿಂದ ನಡೆದ ಬಂಟ ಸಂಭ್ರಮ 2023 ಸಭಾ ಕಾರ್‍ಯಕ್ರಮದಲ್ಲಿ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಜಾಗತಿಕ ಬಂಟ ಸಂಘಗಳ ಒಕ್ಕೂಟ ಇದರ ಐಕಳ ಇದರ ಅಧ್ಯಕ್ಷರಾದ ಹರೀಶ್ ಶೆಟ್ಟಿ ದೀಪ ಬೆಳಗಿಸಿ ಕಾರ್‍ಯಕ್ರಮ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾರ್ಟರ್‍ಡ್ ಹೌಸಿಂಗ್ ಪ್ರೈ ಲಿಮಿಟೆಡ್ ಎಂ. ಡಿ. ಏರ್‍ಯ ಬಾಲಕೃಷ್ಣ ಹೆಗ್ಡೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ಸುಗ್ಗಿ, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಉಪಾಧ್ಯಕ್ಷರಾದ ಡಾ. ಪ್ರಶಾಂತ್ ಮಾರ್ಲ, ಕಾರ್‍ಯದರ್ಶಿ ಜಗನ್ನಾಥ ಚೌಟ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ, ಜೊತೆಕಾರ್‍ಯದರ್ಶಿ ರಂಜನ್ ಕುಮಾರ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷರಾದ ರಮಾ ಎಸ್ ಭಂಡಾರಿ, ಯುವ ವಿಭಾಗ ಅಧ್ಯಕ್ಷರಾದ ನಿಶಾನ್ ಆಳ್ವ, ಸಾಂಸ್ಕೃತಿಕ ವಿಭಾಗ ಸಂಚಾಲಕರಾದ ಪ್ರಕಾಶ್ ಶೆಟ್ಟಿ ತುಂಬೆ ಉಪಸ್ಥಿತರಿದ್ದರು.