ಸುಳ್ಯ – ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ರಾಮಕುಂಜ ಅವರಿಂದ ಮತಯಾಚನೆ…

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜಿ ಕೃಷ್ಣಪ್ಪ ರಾಮಕುಂಜ ಸುಳ್ಯದ ಆಸುಪಾಸಿನಲ್ಲಿ ಮತ ಬೇಟೆ ನಡೆಸಿದರು.
ಅವರು ಪ್ರಣಾಳಿಕೆ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಪಿ ಸಿ ಜಯರಾಮ್, ಕೆಪಿಸಿಸಿ ಜನರಲ್ ಸೆಕ್ರೆಟರಿ ಧನಂಜಯ ಅಡಪಂಗಾಯ, ಪ್ರಚಾರ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್, ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಪ್ರಚಾರ ಸಮಿತಿ ಉಸ್ತುವಾರಿ ಎಂ ವೆಂಕಪ್ಪ ಗೌಡ ಸಹಿತ ಹಲವಾರು ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.


