ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನವೀನ್ ರೈ ಮೇನಾಲ ನಿಧನಕ್ಕೆ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ…

ಸುಳ್ಯ: ಬಿಜೆಪಿ ಧುರೀಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನವೀನ್ ರೈ ಮೇನಾಲರವರ ಅಕಾಲಿಕ ನಿಧನಕ್ಕೆ ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನವೀನ್ ರೈ ಮೇನಾಲ ಅವರು ಪ್ರಗತಿಪರ ಕೃಷಿಕರಾಗಿ, ಬಿ.ಜೆ.ಪಿ.ಮುಖಂಡರಾಗಿ, ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು. ನನ್ನ ಆತ್ಮೀಯ ಸ್ನೇಹಿತರಾದ ಅವರ ನಿಧನವು ಸಮಾಜಕ್ಕೆ ತುಂಬಲಾರದ ನಷ್ಟ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
