ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 72 ಕಡೆಗಳಲ್ಲಿ ಗುದ್ದಲಿಪೂಜೆ…..
ಮಂಗಳೂರು: ಮಂಗಳೂರು ದ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 72 ಕಡೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ್ ಕಾಮತ್ ಸೂಚನೆಯ ಮೇರೆಗೆ ಸ್ಥಳೀಯ ಮುಖಂಡರು ನೆರವೇರಿಸಿದ್ದಾರೆ.
ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ ವಿವಿಧ ವಾರ್ಡ್ ಗಳಲ್ಲಿ ಒಟ್ಟು 72 ಕಾಮಗಾರಿಗಳಿಗೆ ಸ್ಥಳೀಯ ಮುಖಂಡರ ನೇತ್ರತ್ವದಲ್ಲಿ ಗುದ್ದಲಿಪೂಜೆ ನೆರವೇರಿದೆ. ಲೋಕೋಪಯೋಗಿ ಇಲಾಖೆಯಿಂದ 6.29 ಕೋಟಿ ವೆಚ್ಚದಲ್ಲಿ ಒಟ್ಟು 28 ಕಾಮಗಾರಿಗಳು, ಸಾಮಾನ್ಯ ನಿಧಿ ಅನುದಾನದಡಿ 2.13 ಕೋಟಿ ವೆಚ್ಚದಲ್ಲಿ 24 ಕಾಮಗಾರಿಗಳು, ಮಳೆಹಾನಿಗೆ ಸಂಬಂಧಪಟ್ಟ ಕಾಮಗಾರಿಗಳು 1.19 ಕೋಟಿ ವೆಚ್ಚದಲ್ಲಿ ಹಾಗೂ ಕೈಗಾರಿಕಾ ವಲಯದ ಅಭಿವೃದ್ಧಿ ಕಾಮಗಾರಿಗಳು 5.65 ಕೋಟಿ ವೆಚ್ಚದ ಕಾಮಗಾರಿಗಳು ಸೇರಿದಂತೆ ಒಟ್ಟು 15.26 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ಮಾಡಲಾಗಿದೆ. ಗುದ್ದಲಿಪೂಜೆ ಶಾಸಕರಿಂದಲೇ ನೆರವೇರಬೇಕು ಎನ್ನುವ ಹಳೆಯ ಸಂಪ್ರದಾಯವನ್ನು ಮುರಿದು, ಸ್ಥಳೀಯರ ಮೂಲಕವೇ ನೆರವೇರಿಸಿದ್ದೇವೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.