ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಶಾಹಿ ಎಕ್ಸ್ ಪೋರ್ಟ್ಸ್ ಕಂಪೆನಿಯ ಕ್ಯಾಂಪಸ್ ನೇಮಕಾತಿ…

ಪುತ್ತೂರು: ನಗರದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯು ಯಶಸ್ವಿಯಾಗಿ ನಡೆಯುತ್ತಿದ್ದು ದೇಶಾದ್ಯಂತ ಶಾಖೆಯನ್ನು ಹೊಂದಿರುವ ಶಾಹಿ ಎಕ್ಸ್ ಪೋರ್ಟ್ಸ್ ಕಂಪೆನಿಯು ಕಾಲೇಜಿಗೆ ಭೇಟಿ ನೀಡಿತ್ತು.
ವಿಶೇಷವಾಗಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಈ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಅಲ್ಲದೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದರು. ವಾರ್ಷಿಕ 4.5 ಲಕ್ಷ ವೇತನವನ್ನು ನೀಡುವ ಹುದ್ದೆಗೆ ನೇಮಕಾತಿಯು ನಡೆದಿದೆ. ನೇಮಕಾತಿ ಪ್ರಕ್ರಿಯೆಯ ಒಟ್ಟು ಮೂರು ಸುತ್ತುಗಳು ಪೂರ್ಣಗೊಂಡಿದ್ದು ಅಂತಿಮ ಸುತ್ತಿಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ 8 ವಿದ್ಯಾರ್ಥಿಗಳ ಸಹಿತ 14 ಜನ ಆಯ್ಕೆಯಾಗಿದ್ದಾರೆ. ಅಂತಿಮ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.
ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಅವಿರತವಾಗಿ ಶ್ರಮಿಸುತ್ತಿದ್ದು ಇನ್ನೂ ಹೆಚ್ಚಿನ ಕಂಪೆನಿಗಳು ನೇಮಕಾತಿಗಾಗಿ ಆಗಮಿಸಲಿವೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sponsors

Related Articles

Back to top button