ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳ ಜಾರಿ- ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸ್ವಾಗತ…

ಸುಳ್ಯ: ಕಾಂಗ್ರೆಸ್ ಪಕ್ಷವು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಾದ 200 ಯೂನಿಟ್ ವಿದ್ಯುತ್, ಮಹಿಳೆಯರಿಗೆ ಉಚಿತ ಪ್ರಯಾಣ, ಯುವ ನಿಧಿ, ಗ್ರಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಈ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಿರುವುದನ್ನು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸ್ವಾಗತಿಸಿದ್ದಾರೆ. ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್, ಜುಲೈ 1 ರಿಂದ ಬಿ.ಪಿ.ಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ 10 ಕೆ.ಜಿ.ಅಕ್ಕಿ, ಇದೇ ತಿಂಗಳು ಜೂನ್ 11 ರಿಂದ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ , ಆಗಸ್ಟ್ 15 ರಿಂದ ಗ್ರಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗಳಿಗೆ ರೂ 2000 ಜಮೆ, ಬಿ.ಪಿ.ಎಲ್ ಮತ್ತು ಎ.ಪಿ.ಎಲ್.ಕಾರ್ಡ್ ದಾರರಿಗೆ ಅನ್ವಯ. ಯುವ ನಿದಿ ಯೋಜನೆಯಡಿ ಈ ವರ್ಷ ಪದವಿ ತೇರ್ಗಡೆಗೊಂಡ ಯುವಕರಿಗೆ ಪ್ರತಿ ತಿಂಗಳು 3 ಸಾವಿರ ಮತ್ತು ಡಿಪ್ಲೊಮ ಹೊಂದಿದವರಿಗೆ ರೂ 1500; 2 ವರ್ಷಗಳ ಕಾಲ ಜಮೆ ಆಗಲಿರುವ ಗ್ಯಾರಂಟಿಗಳು ಈ ಆರ್ಥಿಕ ವರ್ಷದಿಂದ ಜಾರಿಯಾಗಲಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿರುತ್ತದೆ. ಕಳೆದ ರಾಜ್ಯ ಸರಕಾರ ಮತ್ತು ಈಗಿನ ಕೇಂದ್ರ ಸರಕಾರ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ವಂಚಿಸಿದ್ದಾರೆ. ಆದರೆ ಇಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೆ ಜನರಿಗೆ ಕೊಟ್ಟ 5 ಭರವಸೆಗಳನ್ನು ಈಡೇರಿಸಿದ್ದಾರೆ. ಕರ್ನಾಟಕದಲ್ಲಿ ಬಿ.ಜೆ.ಪಿ.ಮತ್ತು ಜೆ.ಡಿ.ಎಸ್ ಪಕ್ಷವನ್ನು ಜನರು ತಿರಸ್ಕರಿಸಿ ಕಾಂಗ್ರೇಸ್ ನ್ನು ಬೆಂಬಲಿಸಿದ್ದಾರೆ. ಜನರ ಭರವಸೆಗಳನ್ನು ಅತೀ ಶೀಘ್ರವಾಗಿ ಜಾರಿ ಮಾಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ನೇತೃತ್ವದ ರಾಜ್ಯ ಸರಕಾರವನ್ನು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಅಭಿನಂದಿಸಿದ್ದಾರೆ.

Sponsors

Related Articles

Back to top button