ಬಿ.ಸಿ.ರೋಡಿನಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ…
ಬಂಟ್ವಾಳ: ಬಡವರಿಗಾಗಿ ಹಲವಾರು ಯೋಜನೆಗಳನ್ನು ಸಮಾಜವನ್ನು ಬಲಿಷ್ಠವಾಗಿರಿಸುವ ಕಾರ್ಯವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಶ್ರೀಮಂತರ ಪರವಾಗಿರುವ ಕೇಂದ್ರ ಸರಕಾರ ಬಡವರ ಬಗ್ಗೆ ಚಿಂತನೆಯನ್ನೇ ಮಾಡುತ್ತಿಲ್ಲ. ಬಡವರಿಗೆ ಅನುಕೂಲವಾಗುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ ಹೆಮ್ಮೆ ನಮ್ಮಲ್ಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದರು.
ಅವರು ಬಿ.ಸಿ.ರೋಡಿನಲ್ಲಿ ನಡೆದ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಕರ್ನಾಟಕ ರಾಜ್ಯ ಸರಕಾರದ ಮಹತ್ತರ ಯೋಜನೆಯಾದ ಶಕ್ತಿ ಯೋಜನೆಗೆ ಚಾಲನೆಯಾದ ಸಂದರ್ಭ ಸಂಭ್ರಮಾಚರಣೆಯ ಸಂದರ್ಭ ಮಾತನಾಡಿದರು. ಪಾಣೆಮಂಗಳೂರು ಮಹಿಳಾ ಂಗ್ರೆಸ್ ಅಧ್ಯಕ್ಷೆ ಜಯಂತಿ ವಿ ಪೂಜಾರಿ ಸ್ವಾಗತಿಸಿದರು.
ಈ ಸಂದರ್ಭ ಬಂಟ್ವಾಳ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಲವಿನಾ ವಿಲ್ಮಾ ಮೋರಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಸುದರ್ಶನ್ ಜೈನ್, ಫ್ಲೋಸಿ ಡಿಸೋಜಾ, ಮಂಜುಳಾ ಸದಾನಂದ, ಮಂಜುಳಾ ಕುಶಾಲಪ್ಪ ಗೌಡ, ಮಲ್ಲಿಕಾ ಶೆಟ್ಟಿ, ಜಗದೀಶ್ ಕೊಯ್ಲ, ಪ್ರವೀಣ್ ರೋಡ್ರಿಗಸ್, ಪ್ರವೀಣ್ ಬಂಟ್ವಾಳ, ಅಬ್ಬಾಸ್ ಆಲಿ, ಉಮೇಶ್ ಬೋಳಂತೂರು, ಉಮೇಶ್ ನಾಯಿಲ, ವಿಜಯ ಅಲ್ಲಿಪಾದೆ, ಧನಲಕ್ಷ್ಮೀ ಬಂಗೇರ, ವಿಜಯ ಶೆಟ್ಟಿ, ಭಾರತೀ ರಾಜೇಂದ್ರ, ಧನವಂತಿ ಬಂಗೇರ ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮ ಮುಗಿದ ನಂತರ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂ ಹಾಗೂ ಸಿಹಿ ತಿಂಡಿ ಹಂಚಲಾಯಿತು.