ಸ ಹಿ ಪ್ರಾ ಶಾಲೆ ಮಜಿ ವೀರಕಂಬ -ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಕೊರಗಪ್ಪ ನಾಯ್ಕ ಆಯ್ಕೆ…
ಬಂಟ್ವಾಳ: ಬಂಟ್ವಾಳ ತಾಲೂಕು ವೀರ ಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿನ ಶಾಲಾ ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀಯುತ ಕೊರಗಪ್ಪ ನಾಯ್ಕ ಸಿಂಗೇರಿ ಅವಿರೋಧವಾಗಿ ಆಯ್ಕೆಯಾದರು.
3 ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀಯುತ ಸಂಜೀವ ಮೂಲ್ಯ ಮಜಿ ರವರ ಮಗನ ವಿದ್ಯಾಭ್ಯಾಸ ಮಜಿ ಶಾಲೆಯಲ್ಲಿ ಕೊನೆಗೊಂಡಿದ್ದರಿಂದ ಸರಕಾರದ ನಿಯಮದ ಪ್ರಕಾರ ಅಧ್ಯಕ್ಷ ಸ್ಥಾನ ತೆರವಾದ ಕಾರಣ ಹೊಸ ಅಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಿತು.
ಶ್ರೀಯುತ ಸಂಜೀವ ಮೂಲ್ಯ ರವರು ತಮ್ಮ ಅವಧಿಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರ ಸಹಕಾರದೊಂದಿಗೆ ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯನ್ನು ಶ್ರೀ ಮಾತಾ ಡವಲಪರ್ಸ್ ಸುರತ್ಕಲ್ ಇವರ ಮೂಲಕ ದತ್ತು ಪಡೆಯುವಂತೆ ಮಾಡಿ ದತ್ತು ಸಂಸ್ಥೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಊರ ಸಂಘ-ಸಂಸ್ಥೆ ಗಳ ಸಹಕಾರದೊಂದಿಗೆ ಶಾಲೆಯಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಶಾಲೆಯಲ್ಲಿ ಮಕ್ಕಳ ಗಣನೀಯ ಏರಿಕೆಗೆ ಕಾರಣರಾಗಿದ್ದರು.
ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಯುತ ದಿನೇಶ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಶಾಲಾ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಶ್ರೀಯುತ ಕೊರಗಪ್ಪ ನಾಯ್ಕ ರವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದರು.ಶ್ರೀಯುತರು ಪ್ರಸ್ತುತ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಹಾಗೂ ಪಿಂಗಾರ ರೈತ ಉತ್ಪಾದಕರ ಸಂಘದ ನಿರ್ದೇಶಕರಾಗಿದ್ದು ಗ್ರಾಮ ಅಭಿವೃದ್ಧಿ ಯೋಜನೆಯ ವೀರಕಂಬ ಒಕ್ಕೂಟದ ನಿಕ್ಕಟಪೂರ್ವ ಅಧ್ಯಕ್ಷರಾಗಿದ್ದರು.
ನೂತನ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಸಮಿತಿ ಎಲ್ಲಾ ಸದಸ್ಯರು ಹಾಗೂ ಕಾರ್ಯದರ್ಶಿ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.