ವಿದ್ಯುತ್ ಪ್ರವಹಿಸಿ ಬಾಲಕನ ದುರ್ಮರಣ- ಮೆಸ್ಕಾಂ ನಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಯವರಿಗೆ ಕೆ. ಎಂ ಮುಸ್ತಫ ಮನವಿ…

ಸುಳ್ಯ: ಕಳೆದ ವರ್ಷ ಜೂನ್ ತಿಂಗಳಲ್ಲಿ ಭಾರೀ ಮಳೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿದ್ಯುತ್ ಲೈನ್ ಗೆ ಮರದ ಕೊಂಬೆ ಬಿದ್ದು ವಿದ್ಯುತ್ ಪ್ರವಹಿಸಿ ಐವರ್ನಾಡು ಸುತ್ತ ಮುತ್ತಲಿನ ಮನೆಗಳ ವಿದ್ಯುತ್ ಉಪಕರಣಗಳು ನಾಶ ಹೊಂದಿದ್ದು, ಆ ಸಂದರ್ಭದಲ್ಲಿ ಮಹಮ್ಮದ್ ಆದಿಲ್ ಎಂಬ 7 ವರ್ಷದ ಬಾಲಕ ವಿದ್ಯುತ್ ಪ್ರವಹಿಸಿ ಮರಣ ಹೊಂದಿದ್ದು, ಅವರ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆ ಮೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದ್ದರೂ ಈವರೆಗೆ ಬೇಡಿಕೆ ಈಡೇರಿರುವುದಿಲ್ಲ.ಆದ್ದರಿಂದ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಮೆಸ್ಕಾಂ ಗೆ ಆದೇಶ ನೀಡಬೇಕೆಂದು ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಾಫ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುತ್ತಾರೆ.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಯವರು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ, ಸುಳ್ಯ ಬ್ಲಾಕ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಮೊದಲಾದವರು ಉಪಸ್ಥಿತರಿದ್ದರು.