ಜಿಲ್ಲಾ ವಕ್ಫ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಮತ್ತು ಸ್ವಾಗತ…

ಮಂಗಳೂರು: ದ. ಕ. ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುಅಝಮ್ ಪಾಷಾ ವರ್ಗಾವಣೆ ಗೊಂಡು ದಾವಣಗೆರೆ ಗೆ ತೆರಳುವ ಹಿನ್ನಲೆಯಲ್ಲಿ ಮತ್ತು ದ. ಕ. ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉಡುಪಿಯಿಂದ ಮಂಗಳೂರಿಗೆ ವರ್ಗಾವಣೆ ಗೊಂಡು ಪದ ಸ್ವೀಕಾರ ಮಾಡುವ ಸಂದರ್ಭದಲ್ಲಿ ನಿರ್ಗಮಿಸುವ ಅಧಿಕಾರಿಯನ್ನು ಸನ್ಮಾನಿಸಿ ಬೀಳ್ಕೊಡಲಾಯಿತು ಹಾಗೂ ಆಗಮಿಸುವ ಅಧಿಕಾರಿಗೆ ಹೂಗುಚ್ಚ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಮುಸ್ತಫ ಸುಳ್ಯ ಹಾಗೂ ಸಿಬ್ಬಂದಿ ಗಳು ಉಪಸ್ಥಿತರಿದ್ದರು.
