ಬೆಳ್ತಂಗಡಿ ತಾಲ್ಲೂಕು ಸರಕಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ…
ಬೆಳ್ತಂಗಡಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಇತ್ತೀಚೆಗೆ ಬೆಳ್ತಂಗಡಿ ತಾಲ್ಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ರೋಗಿಗಳೊಂದಿಗೆ ಸಂವಾದ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಕೆಪಿಸಿಸಿ ಬೆಳ್ತಂಗಡಿ ಉಸ್ತುವಾರಿ ಹಾಗು ಮುಖ್ಯ ವಕ್ತಾರರಾದ ಟಿ ಎಂ ಶಾಹಿದ್ ತೆಕ್ಕಿಲ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾಕ್ಟರ್ ಕಿಶೋರ್ ಕುಮಾರ್,ತಾಲ್ಲೂಕು ವೈದ್ಯಾಧಿಕಾರಿ ಡಾಕ್ಟರ್ ಪ್ರಕಾಶ್, ಡಾಕ್ಟರ್ ಚಂದ್ರಕಾಂತ್ ಮತ್ತು ಸ್ಥಳೀಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.