ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ರಾಜ್ಯಮಟ್ಟದ ಅಲ್ಪಸಂಖ್ಯಾತರ ಮುಖಂಡರ ಸಭೆ…

ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳ ಸಭೆಯು ಜೂ.18 ರಂದು ಪಕ್ಷದ ಬೆಂಗಳೂರಿನಲ್ಲಿರುವ ಕಚೇರಿ, ಜೆಪಿ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿಗಳು, ಕಡಬ ತಾಲೂಕು ಅಧ್ಯಕ್ಷರಾದ ಹಾಜಿ ಸಯ್ಯದ್ ಮೀರಾ ಸಾಹೇಬ್ರವರು ಭಾಗವಹಿಸಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಹೆಚ್ಚಿನ ಒತ್ತನ್ನು ಕೊಡಬೇಕು. ಪಕ್ಷದ ಕಾರ್ಯಕರ್ತರಿಗೆ ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳದೆ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಮುಂದೆ ನಡೆಯುವಂತಹ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷ ನಿರ್ಣಾಯಕ ಪಾತ್ರವನ್ನು ವಹಿಸುವುದಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಎಚ್ ಡಿ ದೇವೇಗೌಡ ರವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಅಧ್ಯಕ್ಷರು ಸಿಎಂ ಇಬ್ರಾಹಿಂ ರವರು ಪಕ್ಷದ ಜಿಲ್ಲಾ ಮುಖಂಡರುಗಳ ಸಭೆಯನ್ನು ಕರೆದು ಮಾರ್ಗದರ್ಶನ ನೀಡುವುದರೊಂದಿಗೆ ಪಕ್ಷದ ಜಾತ್ಯಾತೀತ ನೆಲವು ಸಾಮಾಜಿಕ ನ್ಯಾಯವನ್ನು ಬಲಪಡಿಸಬೇಕೆಂದು ಪಕ್ಷದ ಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳು ಉಪಸ್ಥಿತರಿದ್ದರು.