ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ‘ಗಾಂಧಿ ಸಂಕಲ್ಪ ಯಾತ್ರೆ’ ಕಾರ್ಯಕ್ರಮಕ್ಕೆ ಚಾಲನೆ….

ಮಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150ನೆ ಜನ್ಮ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಬಿಜೆಪಿಯು ಹಮ್ಮಿಕೊಂಡ ‘ಗಾಂಧಿ ಸಂಕಲ್ಪ ಯಾತ್ರೆ’ ಕಾರ್ಯಕ್ರಮಕ್ಕೆ ಅ. 20 ರಂದು ಚಾಲನೆ ನೀಡಲಾಯಿತು.
ಮಂಗಳೂರು ಪುರಭವನದ ಬಳಿಯ ಗಾಂಧಿ ಹಾಗು ಅಂಬೇಡ್ಕರ್ ಪ್ರತಿಮೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮವು ನ.21ರವರೆಗೆ ಜಿಲ್ಲಾದ್ಯಂತ ನಡೆಯಲಿದೆ. ಪ್ರತೀ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲಾ 150 ಕಿ.ಮೀ. ಪಾದಯಾತ್ರೆಯಂತೆ 8 ಕ್ಷೇತ್ರದಲ್ಲಿ 1200 ಕಿ.ಮೀ. ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಶಾಸಕರಾದ ಎಸ್. ಅಂಗಾರ, ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

IMG 20191020 160609 300x208

IMG 20191020 160701 300x205

Related Articles

Leave a Reply

Your email address will not be published. Required fields are marked *