ನ.12ರಂದು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ……
ಮಂಗಳೂರು: ರಾಜ್ಯ ಚುನಾವಣಾ ಆಯೋಗ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ದಿನಾಂಕವವನ್ನು ಘೋಷಿಸಿದ್ದು, ನ.12ರಂದು ಚುನಾವಣೆ ನಡೆಯಲಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಅ.24ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಅ.31 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನ.4ರಂದು ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.12ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
ಮರು ಮತದಾನ ಇದ್ದಲ್ಲಿ ನ.13 ರಂದು ಮತದಾನ ಪ್ರಕ್ರಿಯೆ ನಡೆಸಬಹುದಾಗಿದೆ. ನ.14ರಂದು ಆಯಾ ತಾಲೂಕು ಕೇಂದ್ರ ಸ್ಥಳಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ನೀತಿ ಸಂಹಿತೆಯು ಆರಂಭವಾಗಿದ್ದು, ನ.14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ತಿಳಿದುಬಂದಿದೆ.