ಮೀಫ್ ಅಧ್ಯಕ್ಷ ಮೂಸಬ್ಬ. ಪಿ. ಬ್ಯಾರಿ ಸುಳ್ಯ ಭೇಟಿ…
ಜನತಾ ಫ್ಯಾಮಿಲಿ ವತಿಯಿಂದ ಸನ್ಮಾನ…
ಸುಳ್ಯ: ದ. ಕ. ಮತ್ತು ಉಡುಪಿ ಜಿಲ್ಲೆಯ 180 ಕ್ಕೂ ಮಿಕ್ಕಿದ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ. ಪಿ. ಬ್ಯಾರಿ ಯವರು ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸಮ್ಮಿಲನದಲ್ಲಿ ಭಾಗವಹಿಸಲು ಸುಳ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಜನತಾ ಫ್ಯಾಮಿಲಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮೂಸಬ್ಬ ಬ್ಯಾರಿಯವರು ಮಾತನಾಡಿ ಗ್ರಾಮೀಣ ಪ್ರದೇಶವಾದ ಸುಳ್ಯ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ದೇಶಕ್ಕೆ ಮಾದರಿ. ಸುಳ್ಯ ತಾಲೂಕಿನ ಪ್ರತೀ ಮನೆಯಲ್ಲೂ ವಿದ್ಯಾವಂತರನ್ನು ಹೊಂದಿರುವುದು ಇಲ್ಲಿನ ಸೌಹಾರ್ದ ವಾತಾವರಣಕ್ಕೆ ಕಾರಣ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಕೆ. ಎಂ. ಅಬ್ದುಲ್ ಹಮೀದ್ ಜನತಾ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ. ಎಂ. ಅಬ್ದುಲ್ ಮಜೀದ್ ಜನತಾ, ಉಮ್ಮರ್ ಹಾಜಿ ಕಟ್ಟೆಕ್ಕಾರ್ಸ್, ಉದ್ಯಮಿ ರಿಫಾಯಿ ಜನತಾ, ಇರ್ಫಾನ್ ಜನತಾ, ಮಲೆನಾಡು ಚಾರಿಟೇಬಲ್ ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್ಸ್, ಖಯ್ಯುo ಕಟ್ಟೆಕ್ಕಾರ್ಸ್ ಮೊದಲಾದವರು ಉಪಸ್ಥಿತರಿದ್ದರು.