ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ – ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಮಾಹಿತಿ ಕಾರ್ಯಗಾರ…

ಕಲ್ಲಡ್ಕ : ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ – ಸಮಾಜ ಕಾರ್ಯ ವಿಭಾಗ ( ಎಂ ಎಸ್ ಡಬ್ಲ್ಯೂ) ಇವರು ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಮಾಹಿತಿ ಕಾರ್ಯಗಾರವನ್ನು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜ ಇಲ್ಲಿ ಆಯೋಜಿಸಿದ್ದರು.
ವೀರಕಂಬ ಗ್ರಾಮ ವ್ಯಾಪ್ತಿಯ ಸಮುದಾಯ ಆರೋಗ್ಯ ಅಧಿಕಾರಿ ಹರ್ಷಿತ ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ತಿಮ್ಮಪ್ಪ ನಾಯ್ಕ್, ಶಿಕ್ಷಕಿ ಉಷಾ ಸುವರ್ಣ, ಆಶಾ ಕಾರ್ಯಕರ್ತೆ ಸ್ನೇಹ ಲತಾ ಉಪಸ್ಥಿತರಿದ್ದರು.
ಎಂ. ಎಸ್. ಡಬ್ಲ್ಯೂ ವಿದ್ಯಾರ್ಥಿಗಳಾದ ಕು. ನವ್ಯಶ್ರೀ ಮತ್ತು ಕು. ಶೃತಿ ಪಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕರು, ಮಕ್ಕಳು ಭಾಗವಹಿಸಿದ್ದರು.
ಕು. ಪ್ರತೀಕ ಪ್ರಾರ್ಥಿಸಿ,ಕು. ಶಿಲ್ಪ ಸ್ವಾಗತಿಸಿ,.ಕು. ಪ್ರೀತಿಕ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿದರು.