ಸರಕಾರಿ ಪ್ರೌಢಶಾಲೆ ಗೋಳ್ತಮಜಲು – 77 ನೇ ಸ್ವಾತಂತ್ರ್ಯ ದಿನಾಚರಣೆ…

ಬಂಟ್ವಾಳ: 77 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಗೋಳ್ತಮಜಲು ಇಲ್ಲಿ ಜರಗಿತು.
ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷರಾದ ಶ್ರೀಯುತ ಚಂದ್ರಶೇಖರ ಟೈಲರ್ ರವರು ನೆರವೇರಿಸಿ, ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ದೇಶಾಭಿಮಾನವನ್ನು ರೂಡಿಸಿಕೊಂಡು ಭಾರತದ ಸತ್ಪ್ರಜೆಗಳಾಗಬೇಕು ಎಂದು ಹೇಳಿದರು.
ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಚಿತ್ರಕಲಾ ಶಿಕ್ಷಕರಾದ ಶ್ರೀ ಸತ್ಯ ಶಂಕರ ಬಿ, ಅತಿಥಿ ಶಿಕ್ಷಕರಾದ ಶ್ರೀಮತಿ ಪವಿತ್ರಾ ಬಿ ಹಾಗೂ ಶ್ರೀಮತಿ ಅಶ್ವಿತಾ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಶಿಕ್ಷಕರಾದ ನಾರಾಯಣಗೌಡ ಇವರು ಶಿಕ್ಷಕರು ಸಮಯ ಪ್ರಜ್ಞೆ, ಕರ್ತವ್ಯ ಪ್ರಜ್ಞೆಯಿಂದ ಮಾದರಿಯಾಗಬೇಕು ಎಂದು ಹಿತನುಡಿದರು.
ಮುಖ್ಯ ಶಿಕ್ಷಕಿಯಾದ ಶ್ರೀಮತಿ ವಿದ್ಯಾಲತಾ ಇವರು ವರ್ಗಾವಣೆಗೊಳ್ಳುತ್ತಿರುವ ಶಿಕ್ಷಕರು ಶಾಲೆಯಲ್ಲಿ ನಿರ್ವಹಿಸಿದ ಕರ್ತವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಭಾಷಣ ಮತ್ತು ದೇಶಭಕ್ತಿ ಗೀತೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವೇದಿಕೆಯಲ್ಲಿ ಗೋಳ್ತಮಜಲು ಗ್ರಾಮಪಂಚಾಯತ್ ಸದಸ್ಯರಾದ ಶ್ರೀ ಪುರುಷೋತ್ತಮ ,ಶ್ರೀಮತಿ ನಳಿನಾಕ್ಷಿ, ಶ್ರೀಮತಿ ಸರೋಜಿನಿ ಹಾಗೂ ವೀರಕಂಭ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಜಯಂತಿ, ಎಸ್. ಡಿ. ಎಂ .ಸಿ ಸದಸ್ಯರಾದ ಮೋನಪ್ಪ ದೇವಸ್ಯ, ಬಾಲಕೃಷ್ಣ ಕೊಟ್ಟಾರಿ,ಸ್ಥಳೀಯರಾದ ಸುಂದರ ಶೆಟ್ಟಿ , ಸತ್ಯಸಾಯಿ ಸೇವಾ ಸಂಸ್ಥೆಯ ನಾರಾಯಣ ರಾವ್ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಸಿ ಸದಸ್ಯರು,ಪೋಷಕರು, ಅಧ್ಯಾಪಕ ವೃಂದ ವಿದ್ಯಾರ್ಥಿಗಳು ಹಾಜರಿದ್ದರು.
ಶಿಕ್ಷಕಿ ಶ್ರೀಮತಿ ಸುನೀತಾ ಬಿ. ಪ್ರಾಸ್ತವಿಕ ಮಾತನಾಡಿ,ಶಿಕ್ಷಕಿ ಶ್ರೀಮತಿ ಸುಜಾತ ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕರಾದ ಶ್ರೀ ಶಂಕರ್ ಪಾವಸ್ಕರ್ ಸ್ವಾಗತಿಸಿ,ಶಿಕ್ಷಕರಾದ ಚಿದಾನಂದ ಕೆ ವಂದಿಸಿದರು, ಶಿಕ್ಷಕರಾದ ಸತ್ಯಶಂಕರ್ ಕಾರ್ಯಕ್ರಮ ನಿರೂಪಿಸಿದರು.