ಸೌಜನ್ಯ ಕೊಲೆ ಪ್ರಕರಣ – ನ್ಯಾಯಕ್ಕಾಗಿ ಹೋರಾಟ…

ಬಂಟ್ವಾಳ: ಧರ್ಮಸ್ಥಳದಲ್ಲಿ 1l ವರ್ಷಗಳ ಹಿಂದೆ ವಿದ್ಯಾರ್ಥಿ ಸೌಜನ್ಯ ಕೊಲೆ ಮಾಡಿದ ಅಪರಾಧಿಗಳಿಗೆ ಶಿಕ್ಷೆ ಆಗಬೇಕು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ಸಜಿಪ ವಲಯ ಆಶ್ರಯದಲ್ಲಿ ಆ. 21 ರಂದು ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಜಂಕ್ಷನ್ ನಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಯಿತು.
ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆಯಲ್ಲಿ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಎಸ್ ಶ್ರೀಕಾಂತ್ ಶೆಟ್ಟಿ, ಸೌಜನ್ಯ ಅವರ ತಾಯಿ ಕುಸುಮಾವತಿ, ಸಹೋದರಿ ಸೌಂದರ್ಯ, ಮಾವ ಗಿರೀಶ್ ಗೌಡ ಹಾಗೂ ರವಿಕುಮಾರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅರುಣ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು.