ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ…

ಮಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ನೇತೃತ್ವದ ಹಿಂದೂ ರುದ್ರಭೂಮಿ ಸಮಿತಿ ಭೇಟಿ ಮಾಡಿ ಹಿಂದೂ ರುದ್ರ ಭೂಮಿಗೆ ಮಂಜೂರಾದ ಭೂಮಿಯ ಒತ್ತುವರಿ ತೆರವುಗೊಳಿಸಿ ಹೆಚ್ಚಿನ ಭೂಮಿ ಮಂಜೂರು ಮಾಡುವಂತೆ ಲಿಖಿತ ಮನವಿಯನ್ನು ಆ.29 ರಂದು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಉಪಸ್ಥಿತರಿದ್ದರು. ಹಿಂದೂ ರುದ್ರಭೂಮಿ ಸಮಿತಿ ಶಾರದ ನಗರ ಸಜೀಪ ಮುನ್ನೂರು ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್, ಸಜೀಪ ಮುನ್ನೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯೂಸುಫ್ ಕರಂದಾಡಿ ಜೊತೆಗಿದ್ದರು.