ಗೃಹಲಕ್ಷ್ಮಿ ಯೋಜನೆ – ಆರಂತೋಡು ಗ್ರಾಮ ಪಂಚಾಯತ್ ಅಮೃತ ಸಭಾಭವನ ದಲ್ಲಿ ತುಂಬಿ ತುಳುಕಿದ ಫಲಾನುಭವಿಗಳು…

ಸುಳ್ಯ: ಕರ್ನಾಟಕ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಆರಂತೋಡು ಗ್ರಾಮ ಪಂಚಾಯತಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ದೀಪ ಬೆಳಗಿಸಿ ಉದ್ಘಾಟಿಸಿದರು.
ಸಭಾಂಗಣ ದಲ್ಲಿ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ಫಲಾನುಭವಿಗಳಿಗೆ ಮೈಸೂರಿನಲ್ಲಿ ನಡೆಯುವ ಗ್ರಹ ಲಕ್ಷ್ಮಿ ಯೋಜನೆಯ ಅನುಷ್ಠಾನಗೊಳ್ಳುವುದನ್ನು ವೀಕ್ಷಿಸಲು ಸಭಾಭಾವನದಲ್ಲಿ ಟಿ.ವಿ ಪರದೆಯ ವ್ಯವಸ್ಥೆ ಮಾಡಲಾಗಿತ್ತು.
ಗ್ರಾಮ ಪಂಚಾಯತ್ ಪಂಚಾಯತ್ ಉಪಾಧ್ಯಕ್ಷ ಭವಾನಿ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ನೋಡಲ್ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

