ಸುಳ್ಯ ನಗರದ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕಾಗಿ ಸಚಿವ ರಹೀಂ ಖಾನರಿಗೆ ಟಿ.ಎಂ ಶಹೀದ್ ತೆಕ್ಕಿಲ್ ರಿಂದ ಮನವಿ…

ಸುಳ್ಯ: ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಮತ್ತು ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಹೆಚ್ಚಿನ ಮೊತ್ತದ ಅನುದಾನವನ್ನು ಕರ್ನಾಟಕ ಸರಕಾರದಿಂದ ಒದಗಿಸಿಕೊಡಬೇಕೆಂದು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ರವರು ಮಂಗಳೂರಿನಲ್ಲಿ ಕರ್ನಾಟಕ ಸರಕಾರದ ಹಜ್ ಮತ್ತು ಪೌರಾಡಳಿತ ಸಚಿವರಾದ ರಹೀಂ ಖಾನ್ ರವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಸಿದ್ಧಿಕ್ ಕೊಕ್ಕೊ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಉಪಸ್ಥಿತರಿದ್ದರು.

