ಬಿಸಿಸಿಐ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ ….
ಮುಂಬೈ: ಭಾರತೀಯ ಕ್ರಿಕೆಟ್ ಮಂಡಳಿ ಬಿಸಿಸಿಐನ 39ನೇ ಅಧ್ಯಕ್ಷರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅ.23 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಮೂಲಕ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಳಿತಾಧಿಕಾರಿಗಳ ಸಮಿತಿಯ 33 ತಿಂಗಳ ಆಳ್ವಿಕೆ ಇಂದಿಗೆ ಅಂತ್ಯವಾಗಿದೆ.
ಸೌರವ್ ಗಂಗೂಲಿಯವರ ಅಧಿಕಾರಾವಧಿ ಮುಂದಿನ ವರ್ಷ ಸೆಪ್ಟೆಂಬರ್ ವರೆಗೆ ಮಾತ್ರ ಇರುತ್ತದೆ. ಏಕೆಂದರೆ ಅವರು ಈಗಾಗಲೇ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷರಾಗಿದ್ದಾರೆ. ಬಿಸಿಸಿಐ ನಿಯಮ ಪ್ರಕಾರ ಅವರು ಕೂಲಿಂಗ್ ಆಫ್ ಪಿರೆಡ್ ನ ನಂತರ ಬಿಸಿಸಿಐ ಹುದ್ದೆಗೆ ರಾಜೀನಾಮೆ ನೀಡಲೇ ಬೇಕು.
ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರ ಕಿರಿಯ ಸೋದರ ಅರುಣ್ ಧುಮಾಲ್ ಖಜಾಂಚಿ ಮತ್ತು ಕೇರಳದ ಜಯೇಶ್ ಜಾರ್ಜ್ ಜಂಟಿ ಕಾರ್ಯದರ್ಶಿಯಾಗಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಕಾರ್ಯದರ್ಶಿಯಾಗಿರುತ್ತಾರೆ.