ಭಾರತ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ – ಮಂಗಳೂರಿನಲ್ಲಿ ಪಾದಯಾತ್ರೆ…

ಮಂಗಳೂರು: ಐತಿಹಾಸಿಕ ಭಾರತ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವದ ಆಚರಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ನಿಂದ ಕುದ್ಮುಲ್ ರಂಗರಾವ್ ಪುರಭವನದ ವರೆಗೆ ನಡೆದ ಪಾದಯಾತ್ರೆಯಲ್ಲಿ ಡಿಸಿಸಿ ಅಧ್ಯಕ್ಷರಾದ ಹರೀಶ್ ಕುಮಾರ್ ಎಂ ಎಲ್ ಸಿ, ಬಿ ರಮಾನಾಥ್ ರೈ, ಜೆ ಆರ್ ಲೋಬೊ, ಐವನ್ ಡಿ ಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳದ ಮಿಥುನ್ ರೈ, ಇನಾಯತ್ ಅಲಿ ಮೂಲ್ಕಿ, ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್, ಶಶಿಧರ ಹೆಗ್ಡೆ, ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿ ಸಿ ಜಯರಾಮ್, ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಬ್ಲಾಕ್ ಕಾರ್ಯದರ್ಶಿ ಪಿ ಎಸ್ ಗಂಗಾಧರ, ಎನ್ ಎಸ್ ಯು ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ, ಜಿಲ್ಲಾ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ಉಬೈಸ್ ಗೂನಡ್ಕ ಮೊದಲಾದವರು ಉಪಸ್ಥಿತರಿದ್ದರು.



