ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ತೆಕ್ಕಿಲ್ ಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ಹಸ್ತಾಂತರ…

ಸುಳ್ಯ: ತೆಕ್ಕಿಲ್ ಗ್ರಾಮೀನಾಭಿವೃದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆ ಗೂನಡ್ಕ ಇಲ್ಲಿಗೆ ಎರಡು ಕಂಪ್ಯೂಟರ್ ಮತ್ತು ಪ್ರಿಂಟರ್ ನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ರವರಿಗೆ ಸೆ.11 ರಂದು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಸಮಿತಿಯ ಪದಾಧಿಕಾರಿಗಳಾದ ಹಾಜಿ ಪಿ.ಎ. ಉಮ್ಮರ್ ಗೂನಡ್ಕ, ತಾಜ್ ಮೊಹಮ್ಮದ್ ಸಂಪಾಜೆ, ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ ಶಾಲಾ ಶಿಕ್ಷಕಿಯರಾದ ತಾಹಿರಾ, ರುಬೀನಾ ಮೊದಲಾದವರು ಉಪಸ್ಥಿತರಿದ್ದರು.
