ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆ – ಸಾಹಿತ್ಯ ಸಂಭ್ರಮ ಹಾಗೂ ಚುಟುಕು ಸಾಹಿತ್ಯ ರಚನಾ ಕಮ್ಮಟ…
ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ದಿನ ಪ್ರತಿಕೆಗಳನ್ನು ಓದುವ ಹವ್ಯಾಸ ಬೆಳೆಸುವ ಮೂಲಕ ಸಾಹಿತ್ಯಾಭಿರುಚಿಯನ್ನು ಹುಟ್ಟಿಸಬಹುದು, ಬರವಣಿಗೆಯ ಕೌಶಲವನ್ನು ವೃದ್ಧಿಸಬಹುದು ಎಂದು ಹಿರಿಯ ಪತ್ರಕರ್ತ, ನಿವೃತ್ತ ಶಿಕ್ಷಕ ಜಯಾನಂದ ಪೆರಾಜೆ ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮತ್ತು ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಸಮಿತಿ ವತಿಯಿಂದ ಪಾಣೆಮಂಗಳೂರು ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾದ ಸಾಹಿತ್ಯ ಸಂಭ್ರಮ ಹಾಗೂ ಚುಟುಕು ಸಾಹಿತ್ಯ ರಚನಾ ಕಮ್ಮಟದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಶಾಲಾ ಸಂಚಾಲಕ ಯೋಗೀಶ್ ಪೈ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯ ವಿನೋದ್ ಸ್ವಾಗತಿಸಿದರು. ಮಕ್ಕಳ ಸಾಹಿತ್ಯ ಪರಿಷತ್ ಬಂಟ್ವಾಳ ಅಧ್ಯಕ್ಷೆ ಶ್ರೀಕಲಾ ಕಾರಂತ್ ಪ್ರಸ್ತಾವನೆ ಗೈದರು. ಸಂಪನ್ಮೂಲ ವ್ಯಕ್ತಿಗಳಾದ ಸುರೇಖ ಯಳವಾರ ,ಶುಭಾಶಂಸನೆಗೈದರು.
ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಗೋಪಾಲಕೃಷ್ಣ ನೇರಳಕಟ್ಟೆ ಇವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಚುಟುಕುಸಾಹಿತ್ಯ ರಚನಾ ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಗಳಾದ ಜಯರಾಮ ಪಡ್ರೆ ನಡೆಸಿಕೊಟ್ಟರು. ಸಾಹಿತಿ ಜಯಾನಂದ ಪೆರಾಜೆ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ನಡೆಯಿತು. ಶಿಕ್ಷಕರಾದ ಕೇಶವ ಬಂಗೇರ, ಸಂತೋಷ್, ರಾಜೇಂದ್ರ ನಿರ್ವಹಿಸಿದರು.