ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ – “ಸಂವಿಧಾನ ಪೀಠಿಕೆಯ ಓದು” ಕಾರ್ಯಕ್ರಮ…

ಮಂಗಳೂರು: ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಅಂಗವಾಗಿ “ಸಂವಿಧಾನ ಪೀಠಿಕೆಯ ಓದು” ಕಾರ್ಯಕ್ರಮವನ್ನು ಸೆ.16 ರಂದು ಆಯೋಜಿಸಲಾಯಿತು.

ಕಾಲೇಜಿನ ಮುಖ್ಯಸ್ಥರಾದ ಡಾ. ಥಾಮಸ್ ಪಿಂಟೋ ರವರು ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾರತೀಯ ಸಂವಿಧಾನದ ಪೀಠಿಕೆಯನ್ನು ಓದಿದರು.

democracy day at srinivas university mukka 01

ವರದಿ:ಪ್ರೊ. ಶ್ರೀನಾಥ್ ರಾವ್ ಕೆ.

Related Articles

Back to top button