ಮಾಜಿ ಸಚಿವ ಡಿ.ಕೆ.ಶಿವಕುಮಾರ್ಗೆ ಜಾಮೀನು ಮಂಜೂರು…
ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಕಳೆದ 48 ದಿನಗಳಿಂದ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ಗೆ ಜಾಮೀನು ಮಂಜೂರು ಮಾಡಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.
25 ಲಕ್ಷ ರೂ. ಬಾಂಡ್ ಹಾಗು ಡಿಕೆಶಿ ತಮ್ಮ ಪಾಸ್‌ಪೋರ್ಟ್ ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು, ಅಗತ್ಯಬಿದ್ದಾಗ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.
2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ದೆಹಲಿ ಮನೆಯಲ್ಲಿ ಐಟಿ ದಾಳಿಯಾದಾಗ ದಾಖಲೆಗಳಿಲ್ಲದ ಹಣ ಪತ್ತೆಯಾಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಇ.ಡಿ.ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆಂದು ದೆಹಲಿಗೆ ಕರೆಸಿದ್ದರು. ಆದರೆ ವಿಚಾರಣೆಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.