ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ…
ಸುಳ್ಯ: ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಇಲ್ಲಿ ಅ. 2 ರಂದು ಪೋಷಕರ ಸಮ್ಮುಖದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.
ಸಮಯ 10 ರಿಂದ 11ರವರೆಗೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ ನಡೆಯಿತು. ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಗಾಂಧೀಜಿಯವರ ಚರಿತ್ರೆ ಮತ್ತು ತತ್ವಗಳಾದ ಸತ್ಯ ಮತ್ತು ಅಹಿಂಸೆಯ ಜೊತೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ‘ಜೈ ಜವಾನ್ ಜೈ ಕಿಸಾನ್ ‘ ಘೋಷಣೆಯೊಂದಿಗೆ ನಮ್ಮ ದೇಶವನ್ನು ರಕ್ಷಿಸುವ ಮತ್ತು ಬಲಿಷ್ಠಗೊಳಿಸುವ ಸೈನಿಕರಿಗೆ ಮತ್ತು ರೈತರಿಗೆ ನಮನ ಸಲ್ಲಿಸಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್ ಅವರು ಹಿತ ನುಡಿಗಳನ್ನಾಡಿದರು .
ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ಪ್ರಾಸ್ತಾವಿಕ ಮಾತನ್ನಾಡಿದರು. ವಿದ್ಯಾರ್ಥಿಗಳಿಂದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುರಿತು ಭಾಷಣ, ದೇಶ ಭಕ್ತಿ ಗೀತೆ ಹಾಡುವ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು. ಈ ಸಂದರ್ಭ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನಕರ ಸಣ್ಣಮನೆ, ಗೌರವಾಧ್ಯಕ್ಷ ತಾಜ್ ಮಹಮ್ಮದ್, ಪೋಷಕರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮತಿ ಅನಿತಾ ಕಾರ್ಯಕ್ರಮವನ್ನು ನಿರೂಪಿಸಿದರು.