ಕಾರಂತರ ಬದುಕು ವಿದ್ಯಾರ್ಥಿಗಳಿಗೆ ಪ್ರೇರಣೆ – ಡಾ. ಪ್ರವೀಣ್ ಕುಮಾರ್…
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗು ಆಂತರಿಕ ಗುಣಮಟ್ಟ ಖಾತರಿ ಕೋಶ, ಕನ್ನಡ ವಿಭಾಗ ಬೆಸೆಂಟ್ ಮಹಿಳಾ ಕಾಲೇಜು ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ 122 ನೇ ಜನ್ಮದಿನೋತ್ಸವ ಕಾರ್ಯಕ್ರಮವವು ಬೆಸೆಂಟ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಕುಮಾರ್ ಕೆ. ಸಿ ಅವರು ವಹಿಸಿಕೊಂಡು ಕಾರಂತರ ಬದುಕು ವಿದ್ಯಾರ್ಥಿಗಳಿಗೆ ಪ್ರೇರಣೆ ಆರೀತಿ ಬದುಕಿದಾಗಲೇ ಜೀವನದ ಸಾರ್ಥಖ್ಯ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ ಶ್ರೀನಾಥ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾರಂತರ ಬದುಕು ಬರಹದ ಬಗ್ಗೆ ನಾರಾಯಣ ಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಬೆಸೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ರಾಜಶೇಖರ ಹೆಬ್ಬಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸದಸ್ಯ ಡಾ. ಮಾಧವ ಎಂ ಕೆ ಹಾಗು ಕ.ಸಾ.ಪ ಕಾರ್ಯದರ್ಶಿಗಳಾದ ಸುಬ್ರಾಯ ಭಟ್, ಅರುಣಾ ನಾಗರಾಜ್ ಹಾಗು ಸನತ್ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.