ಶಿಕ್ಷಕಿ ಶಾಂತಾ ಪುತ್ತೂರು ಅವರಿಗೆ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ…

ಮಂಗಳೂರು: ಮಂಗಳೂರಿನ ಪುರಭವನದಲ್ಲಿ ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ನೇತೃತ್ವದಲ್ಲಿ ಅ. 29 ರಂದು ನಡೆದ ಸಾಹಿತ್ಯೋತ್ಸವ ಮತ್ತು 50 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರುರವರ ಅಧ್ಯಕ್ಷ ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೊಳುವಾರು ನಿವಾಸಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಶಾಂತಾ ಪುತ್ತೂರುರವರನ್ನು ಬಹುಮುಖ ಪ್ರತಿಭೆ ನೆಲೆಯಲ್ಲಿ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್, ಕಾಸರಗೋಡು ಕನ್ನಡ ಭವನದ ಅಧ್ಯಕ್ಷ ರಾದ ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ,ದ.ಕ.ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಹಿರಿಯ ಸಾಹಿತಿ ಶ್ರೀ ಜಯಾನಂದ ಪೆರಾಜೆ, ಪಿಂಗಾರ ಪತ್ರಿಕೆ ಸಂಪಾದಕ ರೇಮಂಡ್ ಡಿಕೂನ ತಾಕೋಡೆ,ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವಿಭಾಗ ದ ಶ್ರೀಧರ್,ಡಾ.ಕೊಳ್ಚಪ್ಪೆ ಗೋವಿಂದ ಭಟ್,ಸಂತೋಷ್ ಕುಮಾರ್ ಹೆಗಡೆ, ಕವಯಿತ್ರಿ ಶ್ರೀಮತಿ ರೇಖಾಸುದೇಶ್ ರಾವ್,ವೀಣಾಕಾರಂತ್ ಉಪಸ್ಥಿತರಿದ್ದರು.