ಸುಳ್ಯದ ಕೆ. ಟಿ.ವಿಶ್ವನಾಥ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – ಕೆ. ಎಂ. ಮುಸ್ತಫ, ರಿಯಾಜ್ ಕಟ್ಟೆಕ್ಕಾರ್ ಅಭಿನಂದನೆ…
ಸುಳ್ಯ: ಸಮಾಜಸೇವಾ ಕ್ಷೇತ್ರದಿಂದ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಕೆ ಟಿ ವಿಶ್ವನಾಥ್ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಹಾಗೂ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ , ನ.ಪಂ. ಸದಸ್ಯ ರಿಯಾಜ್ ಕಟ್ಟೆಕ್ಕಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸಮಾಜಸೇವೆ, ಕ್ರೀಡೆ, ಸಾಂಸ್ಕೃತಿಕ ರಂಗದಲ್ಲಿ ಆಹರ್ನಿಶಿ ದುಡಿದ ಡಾ. ಕೆ. ಟಿ. ವಿಶ್ವನಾಥ ರವರಿಗೆ ಅರ್ಹವಾಗಿಯೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಭವಿಷ್ಯದಲ್ಲಿ ಇನ್ನೂ ಹೆಚ್ಚು ಸಮಾಜ ಸೇವಾ ಕಾರ್ಯಗಳನ್ನು ಅವರು ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.