ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಬಹುಮಾನ…
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ನಡೆದ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಪದಕಗಳೊಂದಿಗೆ ನಗದು ಬಹುಮಾನವನ್ನು ಗೆದ್ದುಕೊಂಡಿದ್ದಾರೆ.
ಮಂಗಳೂರು ರನ್ನರ್ಸ್ ಕ್ಲಬ್ ಇದರ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ನೀವಿಯಸ್ ಮಂಗಳೂರು ಮ್ಯಾರಥಾನ್-2023 ಇದರ 21.1 ಕಿಲೋಮೀಟರ್ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಕಾಲೇಜಿನ ಅಂತಿಮ ಎಂಬಿಎ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ.ಐ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದ್ದು 15000 ರೂಪಾಯಿ ನಗದು ಬಹುಮಾನವನ್ನು ಪಡೆದುಕೊಂಡಿದ್ದಾರೆ. ಇದೇ ವಿಭಾಗದಲ್ಲಿ ಕಾಲೇಜಿನ ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು 10000 ರೂಪಾಯಿ ನಗದು ಬಹುಮಾನ ಗಳಿಸಿಕೊಂಡಿದ್ದಾರೆ.
ಈ ವಿದ್ಯಾರ್ಥಿಗಳು ಕಳೆದ ಬಾರಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿಯೂ ಬಹುಮಾನವನ್ನು ಗಳಿಸಿಕೊಂಡಿದ್ದರು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.