17ನೇ ವರ್ಷದ ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ…

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದ ಸಹಯೋಗದಲ್ಲಿ ದಿನಾಂಕ 06-12-2023 ರಂದು ಕಡೇಶಿವಾಲಯದಲ್ಲಿ ಜರಗುವ 17ನೇ ವರ್ಷದ ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಕೆ.ಕೆ.ಶೆಟ್ಟಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಶಾಲಾ ಎಸ್. ಡಿ. ಎಂ.ಸಿ. ಅಧ್ಯಕ್ಷರಾದ ಹರಿಶ್ಚಂದ್ರ ಎಂ. , ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಕಾರ್ಯದರ್ಶಿ ಪುಷ್ಪ ಎಚ್. , ವಿದ್ಯಾ ವರ್ಧಕ ಸಂಘದ ಅಧ್ಯಕ್ಷರಾದ ಮಾಧವ ರೈ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ಬಾಬು ಪೂಜಾರಿ, ಉಪಾಧ್ಯಕ್ಷ ಗಿರಿಯಪ್ಪ ಗೌಡ, ಸ್ವಾಗತ ಸಮಿತಿಯ ಸದಸ್ಯರು, ಪಂಚಾಯತ್ ಸದಸ್ಯರು, ಎಸ್. ಡಿ.ಎಂ.ಸಿ.ಸದಸ್ಯರು, ಶಾಲಾ ಶಿಕ್ಷಕರು, ನಿವೃತ್ತ ಶಿಕ್ಷಕಿ ಸರಸ್ವತಿ ಮತ್ತು ಊರ ಗಣ್ಯರಾದ ಗಣೇಶ ಆರ್ ಶೆಟ್ಟಿ, ವಿದ್ಯಾಧರ ರೈ, ಜಯರಾಮ ರೈ ಪಾಚಿಕೊಡಿ ಮುಂತಾದವರು ಉಪಸ್ಥಿತರಿದ್ದರು.