ಬಂಟ್ವಾಳ ನಗರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಸ್ಥಳಾಂತರಗೊಂಡು ಉದ್ಘಾಟನೆ…

ಬಂಟ್ವಾಳ: ಬಿ.ಸಿ.ರೋಡಿನ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಂಟ್ವಾಳ ನಗರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವು ಬಂಟ್ವಾಳ ಗಿರಿಗುಡ್ಡೆಯ ಸರಕಾರಿ ಪಾಲಿಟೆಕ್ನಿಕ್ ಹಾಸ್ಟೆಲ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಉದ್ಘಾಟನೆಗೊಂಡಿತು.
ಸ್ಥಳಾಂತರಗೊಂಡ ಹಾಸ್ಟೆಲನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಹಾಸ್ಟೆಲ್ ಪ್ರಸ್ತುತ ಬಾಡಿಗೆ ಕಟ್ಟಡದಿಂದ ವಾಸ್ತವ್ಯ ಯೋಗ್ಯ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಇಲ್ಲಿ ಸುಮಾರು 150 ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅವಕಾಶವಿದೆ. ಮುಂದೆ ಆಟದ ಮೈದಾನ ಸೇರಿದಂತೆ ಅವಕಾಶ ಸಿಕ್ಕಾಗ ಹಾಸ್ಟೆಲ್‌ಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಬಿಂದಿಯಾ ನಾಯಕ್ ಅವರು ಪ್ರಸ್ತಾವನೆಗೈದು,ಸ್ವಾಗತಿಸಿದರು. ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಭಗವಾನ್ ಪ್ರಸಾದ್, ಪ್ರಮುಖರಾದ ಮೋಹನರಾಜ್ ಜಿ.ಎಸ್, ಭುವನೇಶ್ವರಿ, ಸುಧಾಕರ ಸಿ.ಎಸ್, ಮೋಹನ ಎನ್, ಹಮೀದ್ ಡಿ, ಬಂಟ್ವಾಳ ಹಿಂದುಳಿದ ವರ್ಗಗಳ ಇಲಾಖೆಯ ಸಿಬಂದಿ, ಹಾಸ್ಟೆಲ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.