ಸಂಪಾಜೆ ಗ್ರಾ.ಪಂ. ಮಾಜಿ ಸದಸ್ಯ ಷಣ್ಮುಗಂ ನಿಧನ – ಟಿ ಎಂ ಶಾಹಿದ್ ತೆಕ್ಕಿಲ್ ಅಂತಿಮ ದರ್ಶನ…

ಸುಳ್ಯ: ಕೆಪಿಸಿಸಿ ಮುಖ್ಯ ವಕ್ತಾರ ಹಾಗು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಇತ್ತೀಚೆಗೆ ನಿಧನ ಹೊಂದಿದ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಷಣ್ಮುಗಂ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು, ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ, ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸಂಪಾಜೆ,ಪಕ್ಷದ ಮುಖಂಡರಾದ ಚಂದ್ರಲಿಂಗಮ್, ರಾಜು ನೆಲ್ಲಿಕುಮೇರಿ ಮೊದಲಾದವರು ಉಪಸ್ಥಿತರಿದ್ದರು.