ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ ರಾಜ್ಯ ಕಾರ್ಯಕಾರಿ ಸಮಿತಿ ಸಭೆ…
ರಾಜ್ಯ ಪ್ರದಾನ ಕಾರ್ಯದರ್ಶಿ ಕೆ.ಎಂ. ಮುಸ್ತಫ ಭಾಗಿ...
ಬೆಂಗಳೂರು: ಕೆಪಿಸಿಸಿ ಅಲ್ಪ ಸಂಖ್ಯಾತರ ವಿಭಾಗ ರಾಜ್ಯ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳ ಮತ್ತು ಜಿಲ್ಲಾಧ್ಯಕ್ಷರುಗಳ ಸಭೆ ಬೆಂಗಳೂರು ರೇಸ್ ಕೋರ್ಸ್ ರಸ್ತೆ ಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜರಗಿತು.
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಅಬ್ದುಲ್ ಜಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.
ದ. ಕ. ಜಿಲ್ಲೆಯಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ.ಮುಸ್ತಫ ಸುಳ್ಯ ಭಾಗವಹಿಸಿದ್ದರು. ಲೋಕಸಭಾ ಚುನಾವಣೆ, ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆ, ಜಿ. ಪಂ, ತಾ. ಪಂ ಚುನಾವಣೆ, ನಿಗಮ, ಮಂಡಳಿಗಳ ನೇಮಕಾತಿ ಬಗ್ಗೆ ಚರ್ಚಿಸಲಾಯಿತು. ಎಐಸಿಸಿ ಮೈನಾರಿಟಿ ವಿಭಾಗದ ರಾಷ್ಟ್ತ್ರೀಯ ಸಂಯೋಜಕರಾಗಿ ನೇಮಕ ಗೊಂಡ ರಾಜ್ಯ ಪದಾಧಿಕಾರಿಗಳು ಮತ್ತು ಇತ್ತೀಚೆಗೆ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ಮೀಫ್ ಸಂಸ್ಥೆ ಯನ್ನು ಗೌರವಿಸಲಾಯಿತು. ರಾಜ್ಯ ಉಪಾಧ್ಯಕ್ಷ ಸಿರಾಜ್ ದಾವಣಗೆರೆ ಸ್ವಾಗತಿಸಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಇರ್ಶಾದ್ ವಂದಿಸಿದರು.