ಸಂಪಾಜೆ ಗ್ರಾ. ಪಂ. ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ – “ಬಾಲ್ಯವನ್ನು ಆನಂದಿಸಿ ಬೆಳೆಯುತ್ತಾ ಸಾಗಿ”…
ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ “ಬಾಲ್ಯವನ್ನು ಆನಂದಿಸಿ ಬೆಳೆಯುತ್ತಾ ಸಾಗಿ” ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್, ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಸದಸ್ಯ ರಾದ ವಿಮಲಾ ಪ್ರಸಾದ್ ಭಾಗವಹಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿ ಶುಭ ಕೋರಿದರು.
ಮಕ್ಕಳಿಗೆ ಚಿತ್ರಕಲೆ, ಪುಸ್ತಕ ಹುಡುಕುವ ಸ್ಪರ್ಧೆ ಸೇರಿದಂತೆ ಬೇರೆ ಬೇರೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಸುಮಾರು 25 ಪುಟಾಣಿ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಕ್ಕಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು. ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಗ್ರಂಥಾಲಯದ ಹಸೀನಾ ನಡೆಸಿಕೊಟ್ಟರು.